ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬಯಿ ನಿವಾಸದ ಹೊರಗೆ ನೇದ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಏಪ್ರಿಲ್ 14 ರಂದು ನಟ ಸಲ್ಮಾನ್ ಖಾನ್ ಅವರ ನಿವಾಸ ಬಳಿ ನಡೆದ ಗುಂಡಿನ ದಾಳಿ ನಡೆದಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದರು. ಇವರಲ್ಲಿ ಕೃತ್ಯಕ್ಕೆ ಬಳಸಲಾದ ಗನ್ ಒದಗಿಸಿದ ಆರೋಪದಲ್ಲಿ ಬಂಧಿತನಾಗಿದ್ದ 32 ವರ್ಷದ ಅನುಜ್ ಥಾಪನ್ ಬುಧವಾರ ಪೊಲೀಸ್ ವಶದಲ್ಲಿದ್ದಾಗಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.