ಬೆಂಗಳೂರು: ಸಂಪತ್ ರಾಜ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆ.ಜಿ.ಹಳ್ಳಿ ಗಲಭೆ ವಿಚಾರದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಕುರಿತಂತೆ ಪ್ರತಿಕ್ರಿಯಿಸಿರುವ ಕಾನೂನನ್ನು ಪ್ರತಿಯೊಬ್ಬರೂ ಗಭರವಿಸಲೇಬೇಕು ಎಂದರು.
ಸರಕಾರ ಕಾನೂನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ ಎಂದೂ ಅವರು ಹೇಳಿದರು.
ಅಖಂಡ ಹೇಳಿಕೆಗೆ ಪ್ರತಿಕ್ರಿಯೆ:
ತಾಮ್ಮ ಬಗ್ಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿ, ನಾನು ಆರಂಭದಿಂದಲೂ ಶಾಸಕ ಅಖಂಡ ಅವರ ಪರವಾಗಿದ್ದೇನೆ. ಬೇರೆಯವರ ವೈಯಕ್ತಿಕ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.
‘ಅಖಂಡ ಶ್ರೀನಿವಾಸ ಮೂರ್ತಿ ಅವರು ಈವರೆಗೂ ನನ್ನ ಬಳಿ ಬಂದು ಮಾತನಾಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಅದರದೇ ಆದ ಪ್ರಕ್ರಿಯೆ ನಡೆಯುತ್ತಿದೆ. ಕೇವಲ ಒಬ್ಬರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದವರು ಹೇಳಿದರು.
ಅಖಂಡ ಅವರು ಮಾಧ್ಯಮಗಳ ಬಳಿ ಮಾತನಾಡುವುದಕ್ಕಿಂತ ನನ್ನ ಬಳಿ ಬಂದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್ ನುಡಿದರು.