ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ನಟ ಸಂಚಾರಿ ವಿಜಯ್ ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆ ಸಮರ್ಪಿಸಿದ್ದಾರೆ.
ಇದೇ ವೇಳೆ, ನಟನ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.
'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ' : ಸಿಎಂ @BSYBJP.
— CM of Karnataka (@CMofKarnataka) June 15, 2021