ನವದೆಹಲಿ: ಭಾರತದ ಟೆನಿಸ್ ತಾರೆಗಳಾದ ಸಾನಿಯಾ ಮಿರ್ಜಾ ಮತ್ತು ಮಹೇಶ್ ಭೂಪತಿ ಅವರು ಅಖಿಲ ಭಾರತ ಟೆನಿಸ್ ಸಂಸ್ಥೆಯ (ಎಐಟಿಎ) ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಕ್ರೀಡಾಪಟುಗಳ (SOM) ಪ್ರತಿನಿಧಿಗಳಾಗಿ ಸಂಸ್ಥೆಯ ಸಾಮಾನ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಗೆ ಕಾರ್ಯಕಾರಿ ಸಮಿತಿಯಲ್ಲೂ ಸ್ಥಾನ ಲಭಿಸಿದೆ.

ಭಾರತೀಯ ಟೆನಿಸ್ನ ಸುಧಾರಣೆಗೆ ತಮ್ಮ ಅನುಭವವನ್ನು ಬಳಸಿಕೊಳ್ಳುವುದಾಗಿ ಸಾನಿಯಾ ತಿಳಿಸಿದ್ದಾರೆ. ಆಟಗಾರರ ಅಗತ್ಯಗಳನ್ನು ಅರ್ಥಮಾಡಿಕೊಂಡು ಕ್ರೀಡೆಯ ಬೆಳವಣಿಗೆಗೆ ಶ್ರಮಿಸುವುದು ತಮ್ಮ ಗುರಿ ಎಂದು ಹೇಳಿದ್ದಾರೆ.















































































