ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಬಿಡುಗಡೆಯ ಭಾಗ್ಯ ದೊರೆತಿದೆ. ಹೈಕೋರ್ಟ್ ನಟಿ ಸಂಜನಾ ಜಾಮೀನು ಮಂಜೂರು ಮಾಡಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಸಂಜನಾಗೆ ಶಸ್ತ್ರ ಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವೈದ್ಯರು ಮಾಡಿರುವ ಸಲಹೆಯ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸೆಪ್ಟೆಂಬರ್ 8 ರಂದು ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ವಿಚಾರಣೆಗೆ ಕರೆದು, ನಂತರ ಬಂಧಿಸಿದ್ದರು.