ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದೆಬ್ಬಿಸಿರುವ ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದೆ.
ವಂಚನೆ ಆರೋಪ ಎದುರಿಸುತ್ತಿರುವ ಸ್ಯಾಂಟ್ರೋ ರವಿ ವರ್ಗಾವಣೆ ದಂಧೆಯಲ್ಲೂ ಭಾಗಿಯಾಗಿರುವ ಅರೋಪ ಕೇಳಿಬಂದಿದೆ. ಈ ನಡುವೆ, ಮೈಸೂರಿನಲ್ಲಿ ದಾಖಲಾಗಿರುವ ಪ್ರಕರಣವನ್ನಾಧರಿಸಿ ಮಂಜುನಾಥ್ ಅಲಿಯಾಸ್ ಎನ್ನಲಾದ ಸ್ಯಾಂಟ್ರೋ ರವಿಯನ್ನು ಕೆಲವು ದಿನಗಳ ಹಿಂದೆ ಗುಜರಾತ್‌ನಲ್ಲಿ ಬಂಧಿಸುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದರು. ಆತನನ್ನು ಮೈಸೂರಿಗೆ ಕರೆತಂದು ವಿಚಾರಣೆಗೆ ಗುರಿಪಡಿಸಿರುವ ಪೊಲೀಸರು ಮಹತ್ವದ ಸಂಗತಿಗಳನ್ನು ಕಳೆಹಾಕಿದ್ದಾರೆ.
ಈ ನಡುವೆ, ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಚೇರಿ ಮೂಲಗಳು ತಿಳಿಸಿವೆ.