ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿಸಾರಾಯಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30 ದಾಟಿದೆ. ಬುಧವಾರ ನಕಲಿ ಮದ್ಯ ಸೇವಿಸಿದವರ ಪೈಕಿ 70ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ಈ ಘಟನೆ ಸಂಭವಿಸಿದ್ದು ಅಕ್ರಮ ಮದ್ಯ ಹಾವಳಿ ಪ್ರಕರಣ ಬೆನ್ನತ್ತಿರುವ ಪೊಲೀಸರು ಈ ಸಾರಾಯಿ ದುರಂತದ ನಿಗೂಢತೆ ಬೇಧಿಸಿದ್ದಾರೆ.
ಮದ್ಯದಲ್ಲಿ ಮಾರಣಾಂತಿಕ ಮೆಥನಾಲ್ ಇರುವ ಬಗ್ಗೆ ಪ್ರಯೋಗಾಲಯದ ಪರೀಕ್ಷೆಯಲ್ಲಿ ಗೊತ್ತಾಗಿದೆ.
ಕಲ್ಲಕುರಿಚಿ, ವಿಲ್ಲುಪುರಂನ ಆಸ್ಪತ್ರೆಗಳಲ್ಲಿ ಅಸ್ವಸ್ಥರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.



























































