ನವದೆಹಲಿ: ಬಿಜೆಪಿ ಸರ್ಕಾರದ ಪ್ರತಿಷ್ಟಿತ ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಮಯಗಳ ಅನುಷ್ಠಾನಕ್ಕೆ ಮಶ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತಡೆ ಕೋರಿ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತಂತೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಕೇಂದ್ರ ಸರ್ಕಾರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಉತ್ತರ ನೀಡಲು ನಾಲ್ಕು ವಾರಗಳ ಕಾಲಾವಕಾಶ ಕೋರಿದರು.
2024ರ ಪೌರತ್ವ ತಿದ್ದುಪಡಿ ನಿಯಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಸಮಯವಕಾಶ ನೀಡಬೇಕಿದೆ ಎಂದು ಹೇಳಿದ ಪೀಠವು ಮುಂದಿನ ವಿಚಾರಣೆಯನ್ನು ಏಪ್ರಿಲ್ 9 ಕ್ಕೆ ಮುಂದೂಡಿದೆ.