“ಪ್ರಸ್ತುತ ಲಸಿಕೆ ಹಾಕುವ ಪ್ರಕ್ರಿಯೆ ನಡೆದಿದೆ. ಆದರೆ ಮಕ್ಕಳಿಗೆ ಇನ್ನೂ ಲಸಿಕೆ ಬಂದಿಲ್ಲ. ಹಾಗಾಗಿ ಶಾಲೆಗಳನ್ನು ಪುನರಾರಂಭಿಸಿ ಎಂದು ಹೇಳಲು ಸಾಧ್ಯವಿಲ್ಲ”- ಸುಪ್ರೀಂ ಕೋರ್ಟ್
ದೆಹಲಿ: ಶಾಲೆಗಳನ್ನು ಪ್ರಾರಂಭಿಸಿ ಎಂದು ನ್ಯಾಯಾಲಯ ಹೇಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಪುನರಾಂಭವಾಗಿಲ್ಲ. ಹಾಗಾಗಿ ಶಾಲೆಗಳನ್ನು ತೆರೆದು ಬೌತಿಕ ತರಗತಿಗಳನ್ನು ಆರಂಭಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ದೆಹಲಿಯ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ಸೋಮವಾರ ವಿಚಾರಣೆ ನಡೆಸಿದ ಡಿ.ವೈ. ಚಂದ್ರಚೂಡ್ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ತನ್ನದೇ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಎಲ್ಲಾ ರಾಜ್ಯಗಳಲ್ಲಿ ಒಂದೇ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಎಲ್ಲಾ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ನಾವು ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದರು.
ಪ್ರಸ್ತುತ ಲಸಿಕೆ ಹಾಕುವ ಪ್ರಕ್ರಿಯೆ ನಡೆದಿದೆ. ಆದರೆ ಮಕ್ಕಳಿಗೆ ಇನ್ನೂ ಲಸಿಕೆ ಬಂದಿಲ್ಲ. ಇಂತಹಾ ಸಂದರ್ಭದಲ್ಲಿ ಶಾಲೆಗಳನ್ನು ಪುನರಾರಂಭಿಸಿ ಎಂದು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದರು.
ಕೋವಿಡ್‌ನಂತಹಾ ಸಂಭವನೀಯ ಸೋಂಕಿಗೆ ಮಕ್ಕಳನ್ನು ಒಡ್ಡುವ ಪ್ರಯತ್ನ ಬೇಡ. ಈ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಸರ್ಕಾರಗಳಿಗೆ ಕೋರ್ಟ್ ಸಲಹೆ ಮಾಡಿದೆ.