ಮಂಗಳೂರು: ರಾಜ್ಯದಲ್ಲಿ 1 ನೇ ತರಗತಿಯಿಂದ 6 ನೇ ತರಗತಿವರೆಗೆ ಶಾಲೆ ಆರಂಭ ಸದ್ಯಕ್ಕಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆರೋಗ್ಯ ಇಲಾಖೆಯ ತಾಂತ್ರಿಕ ಸಲಹೆ ಪಡೆದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 1 ರಿಂದ ತರಗತಿ ಆರಂಭಿಸಬೇಕಿತ್ತು. ಆದರೆ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸದ್ಯಕ್ಕೆ ಈ ತೀರ್ಮಾನವನ್ನು ಕೈಬಿಡಲಾಗಿದೆ ಎಂದರು.
ಮುಂದೆ, ಆರೋಗ್ಯ ಸಲಹಾ ಸಮಿತಿ ಒಪ್ಪಿಗೆಯ ಬಳಿಕವೇ ತರಗತಿ ಆರಂಭಕ್ಕೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.