ಬೆಂಗಳೂರು: ಮಾಜಿ ಶಾಸಕ ವಸಂತ ಬಂಗೇರ ಅವರು ವಿಧಿವಶರಾಗಿದ್ದಾರೆ. ಬೆಳ್ತಂಗಡಿ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. 79 ವರ್ಷ ಹರೆಯದ ವಸಂತ ಬಂಗೇರ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ಅವರು ಕಾಲ ನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
© 2020 Udaya News – Powered by RajasDigital.


























































