ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಾಮಲಿಂಗ ರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ‘ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾವು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಬೇಕೆಂದು ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿದ್ದಾರೆ.
✅ಸ್ಪಷ್ಟೀಕರಣ
ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ.
ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ… https://t.co/6HoZDPsnxm
— Ramalinga Reddy (@RLR_BTM) November 2, 2024