ಹಾವೇರಿ: ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಾಸೀರ್ ಅಹ್ಮದ್ಖಾನ್ ಪಠಾಣ್ ವಿರುದ್ಧ ದೂರು ನೀಡಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಯಾಸೀರ್ ಅಹ್ಮದ್ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿರುವ ಬಸವರಾಜ್ ಬೊಮ್ಮಾಯಿ, ಪಠಾಣ್ ತನ್ನ ವಿರುದ್ಧ 17-18 ಪ್ರಕರಣಗಳಿವೆ ಎಂದು ಕಳೆದ ವರ್ಷ ಅಫಿಡವಿಟ್ನಲ್ಲಿ ಘೋಷಿಸಿರುವುದನ್ನು ನೆನಪಿಸಿದರು. ಇದೀಗ ಈ ಪ್ರಕರಣಗಳಲ್ಲಿ ಯಾವುದೇ ಸಂಬಂಧವಿಲ್ಲ ಎಂದುಯಾಸೀರ್ ಅಹ್ಮದ್ಖಾನ್ ಪಠಾಣ್ ಹೇಳಿದ್ದಾರೆ. ಆದರೆ, ಅವರ ವಿರುದ್ಧ ಇನ್ನೂ ಪ್ರಕರಣಗಳು ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಹಾಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಅವರು ತಿಳಿಸಿದರು.