BSY ಪುತ್ರ ರಾಘವೇಂದ್ರಗೆ ಸಂಕಷ್ಟ; ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಏಪ್ರಿಲ್ 12ರಂದು ಈಶ್ವರಪ್ಪ ನಾಮಪತ್ರ
ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರು ವಿರುದ್ದ ಸಿಡಿದೆದ್ದಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಿವುದು ನಿಶ್ಚಿತ. ಈ ವರೆಗೂ ಹೇಳಿಕೆಗಳನ್ನು ನೀಡುತ್ತಿದ್ದ ಈಶ್ವರಪ್ಪ ಅವರು ತಮ್ಮ ಉಮೇದುವಾರಿಕೆಯ ದಿನಾಂಕವನ್ನು ಪ್ರಕಟಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಬೆಂಬಲಿಗರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ ಎಂದರು.
ಏಪ್ರಿಲ್ 12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ ಈಶ್ವರಪ್ಪ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.