ಬೆಂಗಳೂರು: ಶಿವಮೊಗ್ಗದ ಹುಣಸೋಡು ಬಳಿ ರಾತ್ರಿ ಸಂಭವಿಸಿದ ಭೀಕರ ಸ್ಫೋಟದ ಕುರಿತಂತೆ ಉನ್ನತ ಮಟ್ಟದ ತನಿಖೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲೆಯ ಅಧಿಕಾರಿಗನ್ನು ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಘಟನೆ ಬಗ್ಗೆ ಸಮರ್ಪಕ ತನಿಖೆಗೆ ಸೂಚಿಸಿದ್ದಾರೆ.
ಇದೇ ವೇಳೆ, ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. (1/2)
— B.S.Yediyurappa (Modi Ka Parivar) (@BSYBJP) January 22, 2021
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನ ಎಂದಿರುವ ಸಿಎಂ, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ. (2/2)
— B.S.Yediyurappa (Modi Ka Parivar) (@BSYBJP) January 22, 2021