ಬೆಂಗಳೂರು: ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿನ ಸ್ಫೋಟ ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈಕುರಿತಂತೆ ಟ್ವೀಟ್ ಮಾಡಿರುವ ಅವರು, ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದವರು ಪ್ರಾರ್ಥಿಸಿದ್ದಾರೆ.
ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ.
1/2— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 22, 2021
ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
















































































