ಬೆಂಗಳೂರು-ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿ ಬಳಿ ಸಂಭವಿಸಿದ ಘಟನೆಯನ್ನು ಕಂದಾಯ ಇಲಾಖೆಯ ಆಯುಕ್ತರಿಂದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಪರಿಷತನಲ್ಲಿ ಪ್ರಕಟಿಸಿದರು.
ನಿಯಮ 68ರಡಿ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಈ ಸಂಬಂಧ ಸ್ಟೋನ್ ಕ್ರಷರ್ ಮಾಲೀಕ ಡಿ.ವಿ.ಸುಧಾಕರ್ ಮತ್ತು ಜಮೀನು ಮಾಲೀಕ ಕುಲಕರ್ಣಿ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ಕ್ರಷರ್ ಘಟಕದ ಲೈಸೆನ್ಸ್ ರದ್ದುಪಡಿಸಲಾಗಿದೆ ಎಂದು ಹೇಳಿದರು.
ಘಟನೆಗೆ ಕಾರಣವಾದ 65 ಸಾವಿರ ಡಿಟೋನೇಟರ್ಸ್,1275 ಕೆಜಿ ಜಿಲೆಟಿನ್, 17500 ಮೀಟರ್ ಸೇಫ್ಟಿ ಫ್ಯೂಸ್ ವಶಪಡಿಸಿಕೊಳ್ಳಲಾಗಿದೆ. ಹೊಸದಾಗಿ ಕ್ರಷರ್ ಘಟಕಗಳಿಗೆ ಲೈಸೆನ್ಸ್ ಮಂಜೂರು ಮತ್ತು ನವೀಕರಣ ಮಾಡದಂತೆ ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಘಟನೆ ನಡೆದ ಪ್ರದೇಶದಲ್ಲಿ ಮಂಜೂರಾಗಿರುವ ಜಮೀನುಗಳ ಗ್ರಾಂಟ್ಗಳನ್ನು ರದ್ದುಪಡಿಸಲಾಗಿದ್ದು, ಸೋಟದಲ್ಲಿ ಮೃತಪಟ್ಟ 6 ಜನರಿಗೆ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗಿದೆ. ನಾಲ್ಕು ಗುರುತು ಪತ್ತೆ ತಡವಾಗಿದ್ದರಿಂದ ಪರಿಹಾರ ನೀಡಲು ವಿಳಂಬವಾಗಿದೆ.ಶೀಘ್ರ ನೀಡುತ್ತೆವೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಅನಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ಸಂಬಂಧ ಒಟ್ಟು 137 ಮೊಕದಮ್ಮೆಗಳನ್ನು ದಾಖಲಿಸಲಾಗಿರುತ್ತದೆ ಮತ್ತು ಒಟ್ಟು 66 ಪ್ರಕರಣಗಳಲ್ಲಿ ರೂ.67.95 ಲಕ್ಷಗಳ ದಂಡವನ್ನು ವಸೂಲು ಮಾಡಲಾಗಿರುತ್ತದೆ.
ಕಲ್ಲುಗಣಿಗುತ್ತಿಗೆ ಪ್ರದೇಶಗಳಲ್ಲಿ ಪ್ರತಿ ಬಾರಿ ಸ್ಪೋಟಕ ಉಪಯೋಗಿಸುವ ಮೊದಲು ಸಂಬಂಸಿದ ಪೋಲಿಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ಒದಗಿಸುವಂತೆ ಕಲ್ಲುಗಣಿಗುತ್ತಿಗೆದಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗುತ್ತದೆ ಎಂದರು.
ರಾಜ್ಯದಲ್ಲಿ ಅಭಿವೃದ್ದಿ ಮತ್ತು ನಿರ್ಮಾಣ ಕಾಮಗಾರಿಗಳಿಗೆ ಕಟ್ಟಡ ಕಲ್ಲು ಮತ್ತು ಕಟ್ಟಡ ಕಲ್ಲಿನ ಸಂಸ್ಕರಿಸಿದ ಉತ್ಪನ್ನಗಳಾದ ವಿವಿಧ ನಮೂನೆ ಜಲ್ಲಿ, ಎಂ-ಸ್ಯಾಂಡ್ ಮತ್ತು ಮರಳು ಅತಿ ಅವಶ್ಯವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಬೇಡಿಕೆಗೆ ಅನುಗುಣವಾಗಿ ಜಲ್ಲಿ, ಎಂ-ಸ್ಯಾಂಡ್ ಇತ್ಯಾದಿ ಕಟ್ಟಡ ಸಾಮಾಗ್ರಿಗಳ ನಿಯಮಿತ ಪೂರೈಕೆಗಾಗಿ ಕಟ್ಟಡ ಕಲ್ಲು ಗಣಿಗಾರಿಕೆಗಾಗಿ ಕಲ್ಲುಗುತ್ತಿಗೆ ಮಂಜುರಾತಿ ಮತ್ತು ಕ್ರಷರ್ ಲೈಸೆನ್ಸ್ ನೀಡುವುದು ಅಗತ್ಯ ಎಂದು ಪ್ರತಿಪಾದಿಸಿದರು.
ಪ್ರಸ್ತುತ ರಾಜ್ಯದಲ್ಲಿ ಒಟ್ಟು 2493 ಕಲ್ಲುಗಣಿ ಗುತ್ತಿಗೆಗಳನ್ನು ಮತ್ತು 1682 ಕ್ರಷರ್ ಘಟಕಗಳಿಗೆ ಲೈಸೆನ್ಸ್ ಮಂಜೂರು ಮಾಡಲಾಗಿರುತ್ತದೆ ಮತ್ತು ಒಟ್ಟು 289 ಎಂ-ಸ್ಯಾಂಡ್ ಘಟಕಗಳು ಚಾಲ್ತಿಯಲ್ಲಿರುತ್ತದೆ.
ಗಣಿ ಮತ್ತುಭೂವಿಜ್ಞಾನ ಇಲಾಖೆಯು ರಾಜಸ್ವ ಸಂಗ್ರಹಿಸುವ ಇಲಾಖೆಯಾಗಿರುತ್ತದೆ. 2019-20ನೇ ಸಾಲಿನಲ್ಲಿ ಒಟ್ಟು 3629 ಕೋಟಿ ರಾಜಸ್ವ ಮತ್ತು 2020-21ನೇ ಸಾಲಿನಲ್ಲಿ 2318 ಕೊಟಿ ರಾಜಸ್ವ ಸಂಗ್ರಹಿಸಲಾಗಿದೆ.
ರಾಜ್ಯದಲ್ಲಿ ಸರಾಸರಿ ಒಟ್ಟು 250 ದಶಲಕ್ಷ ಮೆಟ್ರಿಕ್ ಟನ್ ಪ್ರಮಾಣದ ಕಟ್ಟಡ ಕಲ್ಲು ಖನಿಜದ ಬೇಡಿಕೆ ಇರುತ್ತದೆ. 2019-20ನೇ ಸಾಲಿನಲ್ಲಿ ಕಟ್ಟಡ ಕಲ್ಲುಗಣಿಗಾರಿಕೆಯಿಂದ 1486 ಕೋಟಿ ಮತ್ತು 2020-21ನೇ ಸಾಲಿನಲ್ಲಿ 735.53 ಕೋಟಿ ರಾಜಧನ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ, 2020-21ನೇ ಸಾಲಿನಲ್ಲಿ( ಜನವರಿ 21 ರ ಅಂತ್ಯದವರೆಗೆ) ಅನಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ಸಂಬಂಧ ಒಟ್ಟು 58 ಮೊಕದಮ್ಮೆಗಳನ್ನು ದಾಖಲಿಸಲಾಗಿದ್ದು 97 ಪ್ರಕರಣಗಳಲ್ಲಿ ರೂ.57.24 ಲಕ್ಷಗಳ ದಂಡ ವಸೂಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.