ಗಳೂರು: ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಶಿವಕುಮಾರ್ ಕೆ. ಬಿ. ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಮೊದಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಕೆ.ಬಿ. ಅವರನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಕೆಎಸ್‌ಆರ್‌ಟಿಸಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಡಾ. ಸೆಲ್ವಮಣಿ ಆರ್ ಅವರು ಶಿವಕುಮಾರ್ ಕೆ.ಬಿ. ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಸಾರಿಗೆ ಕ್ಷೇತ್ರದಲ್ಲಿ ಆಡಳಿತಾತ್ಮಕ ಅನುಭವ ಹೊಂದಿರುವ ಶಿವಕುಮಾರ್ ಕೆ.ಬಿ. ಅವರ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಸೇವಾ ಗುಣಮಟ್ಟ, ಕಾರ್ಯಕ್ಷಮತೆ ಹಾಗೂ ಆರ್ಥಿಕ ನಿರ್ವಹಣೆಯಲ್ಲಿ ಮತ್ತಷ್ಟು ಸುಧಾರಣೆ ಕಾಣುವ ನಿರೀಕ್ಷೆ ವ್ಯಕ್ತವಾಗಿದೆ.






































































