ಶಿವಮೊಗ್ಗ: ಮಲೆನಾಡ ಸೆರಗು ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡಿದೆ. ಈ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.
ಶಿವಮೊಗ್ಗಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರ ವಿಮಾನವು ಇದೇ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಬಳಿಕ ಅವರು, ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪರಿಶೀಲಿಸಿ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದು ಶಿವಮೊಗ್ಗದಲ್ಲಿ ಸನ್ಮಾನ್ಯ ಪ್ರಧಾನಿ ಶ್ರೀ @Narendramodi ಅವರಿಂದ ಉದ್ಘಾಟನೆಗೊಂಡ ನೂತನ ವಿಶ್ವ ದರ್ಜೆಯ ವಿಮಾನ ನಿಲ್ದಾಣದ ಸಂಕ್ಷಿಪ್ತ ನೋಟ.#ShivamoggaAirport pic.twitter.com/bKYFXR8kDX
— Basavaraj S Bommai (Modi Ka Parivar) (@BSBommai) February 27, 2023