ಶಿವಮೊಗ್ಗ: ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಾಹಿಸುತ್ತಿದ್ದ ಸಿಬ್ಬಂದಿಯೇ ಡೆಂಗ್ಯೂಗೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್ (35) ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ.
ಕಳೆದ ಕೆಲಸ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ನಾಗರಾಜ್. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.