ಬೆಂಗಳೂರು: ನಾಡಿನಾದ್ಯಂತ ಇಂದು ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮುಸ್ಲಿಂ ಸಮುದಾಯದ ಭಕ್ತಿಪ್ರಧಾನ ಈ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಈದ್ಗಾ ಮೈದಾನಗಳಲ್ಲೂ ಅಪಾರ ಸಂಖ್ಯೆಯಲ್ಲಿ ಮುಸ್ಲಿಮರು ಪ್ರಾರ್ಥನೆ ನೆರವೇರಿಸಿ ಶುಭಾಶಯಗಳ ವಿನಿಮಯ ಮಾಡಿದರು.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗಿಯಾದರು. ಸ್ಥಳೀಯ ಶಾಸಕರಾದ ಜಮೀರ್ ಅಹಮದ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ, ಮುಸ್ಲಿಂ ಬಾಂಧವರಿಗೆ ಪವಿತ್ರ ಬಕ್ರೀದ್ ಹಬ್ಬದ ಶುಭ ಕೋರಿದೆ.
ಮಾಜಿ ಸಚಿವರಾದ @BZZameerAhmedK ಅವರು ಸೇರಿದಂತೆ ಸಾವಿರಾರು ಮುಸ್ಲಿಂ ಬಂಧುಗಳು ಈ ಸಂದರ್ಭದಲ್ಲಿ ಹಾಜರಿದ್ದರು. pic.twitter.com/GzAV3hf4It— Siddaramaiah (@siddaramaiah) July 10, 2022

























































