ಬೆಂಗಳೂರು: ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂಪಾಯಿಗಳಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಿಸಲಾಗುವುದು ಘೋಷಿಸಿದ್ದಾರೆ. ಇಡೀ ವೇಳೆ ರೈತಾಪಿ ಮಕ್ಕಳಿಗೆ ಅನುಕೂಲಕರ ಕಾರ್ಯಕ್ರಮ ರೂಪಿಸುವ ಭರವಸೆ ನೀಡಿದ್ದಾರೆ.
ಕೃಷಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಪ್ರಕಟಿಸಿರುವ ಯೋಜನೆಹಗಳ ಹೈಲೈಟ್ಸ್ ಹೀಗಿದೆ:
ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂಪಾಯಿಗಳಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಶೇ. 3ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಳ
ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ.
ರೈತರು ತಮ್ಮ ಹಾಗೂ ನೆರೆಹೊರೆಯ ರೈತರ ಉತ್ಪನ್ನಗಳ ಸಂಗ್ರಹಣೆಗೆ ಅನುವಾಗುವಂತೆ ಗೋದಾಮು ನಿರ್ಮಾಣಕ್ಕೆ ನೆರವು. 20 ಲಕ್ಷ ರೂಪಾಯಿವರೆಗಿನ ಬ್ಯಾಂಕ್ ಸಾಲಕ್ಕೆ ರಾಜ್ಯ ಸರ್ಕಾರದಿಂದ ಶೇ. 7 ರಷ್ಟು ಬಡ್ಡಿ ಸಹಾಯಧನ
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್ ವ್ಯಾನ್ ಖರೀದಿಸಲು ಶೇ. 4 ಬಡ್ಡಿ ದರದಲ್ಲಿ ಏಳು ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು.
ಹಣ್ಣು, ಹೂವು, ತರಕಾರಿಗಳ ಬೆಲೆ ಕುಸಿತದಿಂದ ರೈತರನ್ನು ಪಾರುಮಾಡಲು ಕ್ರಮ. 50 ತರಕಾರಿ ಮಾರುಕಟ್ಟೆಗಳಲ್ಲಿ KAPPEC ಸಹಯೋಗದೊಂದಿಗೆ ಮಿನಿ ಶೀತಲ ಗೃಹಗಳ ಸ್ಥಾಪನೆಗೆ ಕ್ರಮ.