ಬೆಂಗಳೂರು: ರಾಜ್ಯ ಸರಕಾರವನ್ನು ವಿಸರ್ಜಿಸಬೇಕು ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಲಹೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಜನತಾ ಪಕ್ಷದ ರಾಜ್ಯ ಎಸ್.ಸಿ.ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯರವರು ಸ್ವತಃ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್ ನಾಯಕರಾದ ಕೆ.ಎಚ್.ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಮಹಾದೇವಪ್ಪ ಅವರ ಸೋಲಿಗೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ದಾವಣಗೆರೆಯಲ್ಲಿ ಮೋರ್ಚಾದ ಕಾರ್ಯಕಾರಿಣಿ
ದಾವಣಗೆರೆಯಲ್ಲಿ ಈ ತಿಂಗಳ 6ರಂದು ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಲಾಲ್ ಸಿಂಗ್ ಆರ್ಯ ಅವರು ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಸಿದ್ದರಾಜು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್‌ಕುಮಾರ್, ಸಂಸದರಾದ ಸಿದ್ದೇಶ್ವರ್ ಹಾಗೂಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎಸ್‌ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಶ್ರೀ ವೆಂಕಟೇಶ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಜಗದೀಶ್, ಬೆಂಗಳೂರು ಕೇಂದ್ರ ನಗರ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಭಾಗವಹಿಸಿದ್ದರು.