ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 6ರಂದು ಶನಿವಾರ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮುಖಾಮುಖಿಯಾಗಲಿದ್ದಾರೆ. ಈ ಅವಕಾಶ ಬಯಸುವವರಿಗೆ ಕೆಪಿಸಿಸಿ ಕಡೆಯಿಂದ ಸೂವನೆ ನೀಡಲಾಗಿದ್ದು, ಸಿಎಂ ಕಾರ್ಯಮದಲ್ಲಿ ಭಾಗವಹಿಸುವವರು ಕೆಪಿಸಿಸಿ ಕಚೇರಿಯಲ್ಲಿ ಹೆಸರು ನೋಂದಾಯಿಸಬಹುದಾಗಿದೆ..
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಜುಲೈ 6ರಂದು ಮದ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯಾಲಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಉಪಸ್ಥಿತರಿರುತ್ತಾರೆ ಎಂದು ತಿಳಿಸಿದ್ದಾರೆ.
ಅಂದು ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮುಖ್ಯಮಂತ್ರಿಯವರು ಕಾಂಗ್ರೆಸ್ ಕಾರ್ಯಕರ್ತರ ಮನವಿಗಳನ್ನು ಸ್ವೀಕರಿಸಲಿದ್ದು, ಪಕ್ಷದ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಜುಲೈ 6ರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮುಖಾಮುಖಿಯಗಲು ಬಯಸುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಾಟ್ಸಪ್ ಸಂಖ್ಯೆ 7899116899ರಲ್ಲಿ ತಮ್ಮ ಹೆಸರು, ವಯಸ್ಸು, ವಿಳಾಸ ಹಾಗೂ ಇತರ ಮಾಹಿತಿಯೊಂದಿಗೆ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಮಾಜಿ ಶಾಸಕ ರಮೇಶ್ ಬಾಬು ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿಗಳ ಭೇಟಿಗಾಗಿ ಪಕ್ಷದ ಕಾರ್ಯಾಲಯದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಮೊದಲು ಬಂದವರಿಗೆ /ನೋಂದಾಯಿಸಿಕೊಂಡವರಿಗೆ ಮೊದಲು ಆದ್ಯತೆ ನೀಡಲಾಗುವುದು ಎಂದು ರಮೇಶ್ ಬಾಬು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮುಖಾಮುಖಿಯಗಲು ಬಯಸುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಾಟ್ಸಪ್ ಸಂಖ್ಯೆ 7899116899ರಲ್ಲಿ ತಮ್ಮ ಹೆಸರು, ವಯಸ್ಸು, ವಿಳಾಸ ಹಾಗೂ ಇತರ ಮಾಹಿತಿಯೊಂದಿಗೆ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಮಾಜಿ ಶಾಸಕ ರಮೇಶ್ ಬಾಬು ತಿಳಿಸಿದ್ದಾರೆ.