ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೇ 20ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷವೂ ತಯಾರಿ ನಡೆಸಿದ್ದು ನಾಯಕರ ನಿವಾಸಕ್ಕೆ ಭದ್ರತೆ ಕಲ್ಪಿಸಲಾಗಿದೆ.
The winning team !#Karnataka pic.twitter.com/gzE1VbFBlJ
— Randeep Singh Surjewala (@rssurjewala) May 18, 2023