ಮೈಸೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಸಂಬಂಧ ದೇಣಿಗೆ ಸಂಗ್ರಹ ಕಾರ್ಯ ಸಾಗಿದ್ದು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಗುರಿಯಾಗಿದ್ದ ಸಿದ್ದರಾಮಯ್ಯ ಸಾಂಸ್ಕೃತಿಕ ನಾಡಿನಲ್ಲಿಂದು ಎಲ್ಲರ ಕುತೂಹಲದ ಕೇಂದ್ರಬಿಂದುವಾದರು.
ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಉಪ್ಪಾರ ಸಮುದಾಯದವರು ನಿರ್ಮಿಸಿರುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದರು. ಅಲ್ಲಿ ಶ್ರೀ ರಾಮನಿಗೆ ಕೈಮುಗಿದು ಪೂಜೆ ಸಲ್ಲಿಸಿ ನೆರೆದಿದ್ದ ಜನರ ಗಮನ ಕೇಂದ್ರೀಕರಿಸಿದರು.
ಭಗೀರಥ ಮಹಾ ಸಂಸ್ಥಾನ ಮಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕರಾದ ರವಿಶಂಕರ್ ಸಹಿತ ಮುಖಂಡರನೇಕರು ಈ ಸಮಾರಂಭದಲ್ಲಿ ಭಾಗವಹಿಸಿರು.