ಬೆಂಗಳೂರು: ಪ್ರಚಂಡ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಸನಿಹದಲ್ಲಿದೆ. ಆದರೆ ಮುಖ್ಯಮಂತ್ರಿ ಪಟ್ಟಕ್ಕೇರುವವರು ಯಾರು ಎಂಬುದೇ ಕುತೂಹಲಕಾರಿ ಸಂಗತಿಯಾಗಿದೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಸರ್ಕಸ್‌ನಲ್ಲಿ ತೊಡಗಿದ್ದು, ಅಂತಿಮವಾಗಿ ಸಿದ್ದರಾಮಯ್ಯ ಅವರನ್ನೇ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಎಎನ್‌ಐ ಸುದ್ದಿ ಸಂಸ್ಥೆ ಕೂಡಾ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ಟ್ವೀಟ್ ಮಾಡಿದೆ.
Siddaramaiah to be next Karnataka CM, DK Shivakumar to be his deputy: Sources
Read @ANI Story | https://t.co/lZx3EknmCD#SiddaramaiahCM #DKShivakumar #KarnatakaCM pic.twitter.com/UvWZz5D3Kf
— ANI Digital (@ani_digital) May 17, 2023
ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದರೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ. ಈ ಸಂಬಂಧ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಘೋಷಣೆಯಾಗಲಿದೆ.