ರೌಡಿ ಶೀಟರ್ ಸೈಲೆಂಟ್ ಸುನಿಲ್ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕೂಡಾ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ‘ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ.
“‘ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ.
1/2— Basavaraj S Bommai (Modi Ka Parivar) (@BSBommai) November 29, 2022