ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಹಾಗೂ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು SIT ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಚಾರಣೆಗೆ ಹಾಜರಾಗಲು ಹಲವಾರು ಬಾರಿ ನೊಟೀಸ್ ನೀಡಿದರೂ ತಲೆಮರೆಸಿಕೊಂಡಿದ್ದ ಹೆಚ್.ಡಿ.ರೇವಣ್ಣ ಅವರು ಮಾಜಿ ಪ್ರಧಾನಿ ದೇವೇಗೌಡ ಅವರ ಬೆಂಗಳೂರಿನಲ್ಲಿರುವ ನಿವಾಸದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಶನಿವಾರ ಸಂಜೆ ದಿಢೀರ್ ಕಾರ್ಯಾಚರಣೆಗಿಳಿದರು. ದೇವೇಗೌಡರ ಮನೆಗೆ ತೆರಳಿದ ಪೊಲೀಸರು ರೇವಣ್ಣ ಅವರನ್ನು ಪತ್ತೆ ಮಾಡಿ ವಶಕ್ಕೆ ಪಡೆದು ಕರೆದೊಯ್ದರು.
ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಎಸ್ಐಟಿ ತಂಡ ಈ ಕಾರ್ಯಾಚರಣೆ ನಡೆಸಿದೆ.