ಬೆಂಗಳೂರು: ಸದಾ ಒಂದಿಲ್ಲೊಂದು ಅವಾಂತರಗಳಿಂದಾಗಿ ರಾಜಕೀಯ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗುತ್ತಿರುವ ಸಚಿವ ಅಶ್ವತ್ಥನಾರಾಯಣ್ ಅವರ ಖಾತೆ ಇದೀಗ ಮತ್ತೊಂದು ಬೆಳವಣಿಗೆಯಿಂದಾಗಿ ಸುದ್ದಿಯ ಕೇಂದ್ರಬಿಂದುವಾಗಿದೆ.
ಕೌಶಲ್ಯಾಭಿವೃದ್ದಿ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಮಾಡಲು ಲಕ್ಷಾಂತರ ರೂಪಾಯಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮಧ್ಯವರ್ತಿಯ ಈ ಡೀಲ್ ಪ್ರಹಸನ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿದೆ.
ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ಮ್ಯಾನೇಜರ್ ಹುದ್ದೆಗೆ 65 ಲಕ್ಷ! ರಾಜ್ಯ ಬಿಜೆಪಿ ಸರ್ಕಾರ ಪ್ರಮಾಣಿಕವಾಗಿದ್ದರೆ ವಿಧಾನಸೌಧದ ಆವರಣದಲ್ಲೇ ಭ್ರಷ್ಟರಿಗೆ ಹುದ್ದೆ ಮಾರಾಟ ಮಾಡುವ ಧೈರ್ಯ ಬರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.
ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಅಶ್ವತ್ಥನಾರಾಯಣ್ ಅವರು ಕ್ಯಾಶಲ್ಲೇ ಅಭಿವೃದ್ಧಿಯಾಗಲು ಈ ಪಟಾಲಂನ್ನು ಮುಂದೆ ಬಿಟ್ಟಿದ್ದಾರೆಯೇ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ಮ್ಯಾನೇಜರ್ ಹುದ್ದೆಗೆ 65 ಲಕ್ಷ!@BJP4Karnataka ಸರ್ಕಾರ ಪ್ರಮಾಣಿಕವಾಗಿದ್ದರೆ ವಿಧಾನಸೌಧದ ಆವರಣದಲ್ಲೇ ಭ್ರಷ್ಟರಿಗೆ ಹುದ್ದೆ ಮಾರಾಟ ಮಾಡುವ ಧೈರ್ಯ ಬರಲು ಹೇಗೆ ಸಾಧ್ಯ.
ಕೌಶಲ್ಯಾಭಿವೃದ್ಧಿ ಸಚಿವರಾದ @drashwathcn ಅವರು ಕ್ಯಾಶಲ್ಲೇ ಅಭಿವೃದ್ಧಿಯಾಗಲು ಈ ಪಟಾಲಂನ್ನು ಮುಂದೆ ಬಿಟ್ಟಿದ್ದಾರೆಯೇ? pic.twitter.com/1ck2w03Ba1
— Karnataka Congress (@INCKarnataka) December 9, 2022























































