ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಜನ ಬೇಸತ್ತುಹೋಗಿದ್ದಾರೆ. ಕಾಮಾಗಾರಿ ಸಂಬಂಧ ರಸ್ತೆಗಳನ್ನೇ ಅಗೆಯಲಾಗಿದ್ದು ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.
ಉದ್ಯಾನನಗರಿಯಲ್ಲಿನ ಈ ಅಧ್ವಾನ ಕುರಿತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿತುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಲು ನಗರ ಸಂಚಾರ ಕೈಗೊಂಡ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು, ಸಮಸ್ಯೆಗಳನ್ನು ಕಣ್ಣಾರೆ ಕಂಡರು.
ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ರಾಜಭವನ ರಸ್ತೆ, ನೆಹರು ತಾರಾಲಯ ರಸ್ತೆ, ಕಬನ್ ಪಾರ್ಕ್, ಮಗ್ರತ್ ರಸ್ತೆ, ರಾಜಾರಾಮ ಮೋಹನ್ ರಾಯ್ ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನೂ ನಡೆಸಿದರು.
ಬೆಂಗಳೂರು ಸ್ಮಾರ್ಟ್ ಸಿಟಿ ಎಂ.ಡಿ ರಾಜೇಂದ್ರ ಚೋಳನ್, ಮುಖ್ಯ ಇಂಜಿನಿಯರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲನೆ ವೇಳೆ ಹಾಜರಿದ್ದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ಕೈಗೊಂಡು ಯೋಜನೆಯನ್ನು ಪರಿಪೂರ್ಣಗೊಳಿಸಬೇಕೆಂದು ಸಚಿವರು ಈ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.