ದೆಹಲಿ : ಮಾಜಿ ಸಿಎಂ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಪ್ರಮುಖರಿಗೆ ಈ ಬಾರಿಯ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ 106 ಮಂದಿಯನ್ನು ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಪ್ರಕಟಿಸಿದೆ. ಕರ್ನಾಟಕದ ಎಂಟು ಮಂದಿಯ ಹೆಸರುಗಳು ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿದೆ.
ಕೇಂದ್ರದ ಮಾಜಿ ಸಚಿವರೂ ಆದ ಎಸ್ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ, ಸಾಹಿತಿ ಎಸ್ಎಲ್ ಬೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟವಾಗಿದೆ.
ಇದೇ ವೇಳೆ, ಕರ್ನಾಟದ ಐವರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟವಾಗಿದ್ದು, ಕೊಡಗಿನ ಉಮ್ಮತ್ತಾಟ್ ಜಾನಪದ ನೃತ್ಯ ಮೂಲಕ ಖ್ಯಾತರಾಗಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ , ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಡಾ.ಖಾದರ್ ವಲ್ಲಿ ದುಡೆ ಕುಲ್ಲಾ, ಚಿಕ್ಕಬಳ್ಳಾಪುರದ ತಮಟೆ ಖ್ಯಾತಿಯ ಪಿಂಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಪುರಾತತ್ವ ಶಾಸ್ತ್ರಜ್ಞ ಎಸ್.ಸುಬ್ಬರಾಮನ್, ಹಿರಿಯ ಕಲಾವಿದ ಬೀದರ್ ಜಿಲ್ಲೆಯ ಷಾ ರಶೀದ್ ಅಹ್ಮದ್ ಖಾದ್ರಿ ಅವರನ್ನು ಕೇಂದ್ರ ಸರ್ಜಾರ ಕರ್ನಾಟಕದಿಂದ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ.





















































