ಕೋಲ್ಕತಾ: ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶರಾಗಿದ್ದಾರೆ.
85 ವರ್ಷದ ಸೌಮಿತ್ರ ಚಟರ್ಜಿಯವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.






















































