ಬೆಂಗಳೂರು: ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆದಿದ್ದಾರೆ.
https://twitter.com/MauryaFightsSMA/status/1719718446479622399?t=iAVoydAIlSRuxTY0NvmyUg&s=19
ಪ್ರಧಾನಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ.17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಈ ಪತ್ರವನ್ನು ಸಿಎಂ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

























































