ಬೆಂಗಳೂರು: ಬಿಲ್ಲವ ಸಮುದಾಯಕ್ಕೆ ಗುಡ್ ನ್ಯೂಸ್. ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ಬಹುಕಾಲದ ಬೇಡಿಕೆ ಈಡೇರಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದ ಬಿಲ್ಲವ, ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
"ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ." ಮುಖ್ಯಮಂತ್ರಿ @BSBommai pic.twitter.com/BmNEV2INVK
— CM of Karnataka (@CMofKarnataka) February 20, 2023
























































