ಕನ್ನಡದ ನಟಿ ಶ್ರೀನಿಧಿ ಶೆಟ್ಟಿ ಮತ್ತು ಕ್ರಿಕೆಟಿಗ ಇರ್ಫಾನ್ ಪಠಾಣ್ ಇದೀಗ ಬಾಲಿವುಡ್ ಅಂಗಳದಲ್ಲಿ ಸಕತ್ ಸುದ್ದಿಯಲ್ಲಿದ್ದಾರೆ. ಇವರಿಬ್ಬರ ನಟನೆಯ ‘ಕೋಬ್ರಾ’ ಸಿನಿಮಾ ಭಾರೀ ಕುತೂಹಲ ಕೆರಳುವಂತೆ ಮಾಡಿದೆ. ಕೊಬ್ರಾ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಇದರಲ್ಲಿ ಶ್ರೀನಿಧಿ ಶೆಟ್ಟಿ ‘ಕೋಬ್ರಾ’ದಲ್ಲಿ ಸಕತ್ ಲುಕ್ ಕೊಟ್ಟಿದ್ದಾರೆ. ಈ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಚಿಯಾನ್ ವಿಕ್ರಂ ಕೂಡಾ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು ಚಿತ್ರವನ್ನು ಅಜಯ್ ಜ್ಞಾನಮೂರ್ತಿ ನಿರ್ದೇಶಿಸಿದ್ದಾರೆ.
© 2020 Udaya News – Powered by RajasDigital.