ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಅಧ್ಯಕ್ಷರಾಗಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸು) ಇಂದು ಅಧಿಕಾರವಹಿಸಿಕೊಂಡರು. ಬೆಂಗಳೂರಿನಲ್ಲಿರುವ KSRTC ಕೇಂದ್ರ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.
ಈ ವೇಳೆ ಉಪಸ್ಥಿತರಿದ್ದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಆವರಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಡಾ. ನಂದಿನಿದೇವಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
KSRTC ಸಾರಥ್ಯ ವಹಿಸಿಕೊಂಡ ಎಸ್.ಆರ್.ಶ್ರೀನಿವಾಸ್ ಅವರು ತಮ್ಮ ಅಧಿಕಾರದ ಮೊದಲ ದಿನವೇ ಇಲಾಖಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ನಿಗಮದ ಅಭಿವೃದ್ಧಿ ಕೆಲಸಗಳನ್ನು ಪರಿಪೂರ್ಣಗೊಳಿಸುವ ಭರವಸೆ ನೀಡಿದ ಅವರು, ಜನರಿಗೆ ನಿರೀಕ್ಷಿತ ಸೇವೆ ನೀಡುವ ಜೊತೆಗೆ ನಿಗಮವನ್ನು ಲಾಭದತ್ತ ಮುನ್ನಡೆಸುವ ಇಂಗಿತ ವ್ಯಕ್ತಪಡಿಸಿದರು.































































