ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಿದ ಬೆನ್ನಲ್ಲೇ ಮೂವರು ಡಿಸಿಎಂ ಮಾಡಲು ಬಿಜೆಪಿ ಹೈಕಮಾಂಢ್ ಗ್ರೀನ್ ಸಿಗ್ನಲ್ ನೀಡಿದೆ.
ಆರ್.ಅಶೋಕ್, ಶ್ರೀರಾಮುಲು ಹಾಗೂ ಗೋವಿಂದ್ ಕಾರುಜೋಳ ಅವರನ್ನ ಉಪಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಲಾಗಿದೆ.
ಬುಧವರ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆದರೆ ಈ ಮೂವರು ಡಿಸಿಎಂಗಳು ಪ್ರಮಾಣ ವಚನ ಸ್ವೀಕಾರ ಮಾಡುತ್ತಿಲ್ಲ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಈ ನಾಯಕರು ಪದಗ್ರಹಣ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.