ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಸುಮಾರು 8 ಲಕ್ಷ 69,968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಗ್ಗೆ ಮಾಹಿತಿ ಒದಗಿಸಿದರು. ಫಲಿತಾಂಶದಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದ್ದು. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂದು ವಿವರಿಸಿದರು.
SSLC ಫಲಿತಾಂಶದ ಹೈಲೈಟ್ಸ್:
-
2024ರ ಮಾ.25ರಿಂದ 2024ರ ಏಪ್ರಿಲ್ 6ರವರೆಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-1,
-
441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 6,31,204 ವಿದ್ಯಾರ್ಥಿಗಳು ಉತ್ತೀರ್ಣ,76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ,
-
2,87,416 (65.90%) ಬಾಲಕರು ಉತ್ತೀರ್ಣ,3,43,788 (81.11%) ಬಾಲಕಿಯರು ಉತ್ತೀರ್ಣ,
-
94% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ,
-
92.12% ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ.
-
88.67% ಫಲಿತಾಂಶದೊಂದಿಗೆ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನು
-
50.59% ಫಲಿತಾಂಶದೊಂದಿಗೆ ಯಾದಗಿರಿ ಜಲ್ಲೆ ಕೊನೆಯ ಸ್ಥಾನ.
-
ಉತ್ತೀರ್ಣರಾದವರು ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯಲು ಅವಕಾಶ





















































