ಬೆಂಗಳೂರು: ಕೊರೋನಾ ಸಂಕಷ್ಟದ ಪರಿಸ್ಥಿತಿ ಇರಿವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದಾಗಿದೆ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದಿನ ತಿಂಗಳು ನಡೆಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುಳಿವು ನೀಡಿದ್ದಾರೆ. ಆದರೆ ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಾಗಿ ಸುರೇಶ್ ಕುಮಾರ್ ಹೇಳಿರುವುದು ಸದ್ಯದ ನಿರ್ಧಾರವಾಗಿದೆ. ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ ಎಂದರು.
ಒಂದು ವೇಳೆ ಕೊರೋನಾ ಪ್ರಕರಣಗಳು ಹೆಚ್ಚಾದರೆ, ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಡಲಾಗುತ್ತದೆ ಎಂದು ಸಿಎಂ ಹೇಳಿದರು.