ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಇಂದು ಮತ್ತು ಜು.21ರಂದು ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಕ್ಕಳೆಲ್ಲರೂ ಶಾಂತಚಿತ್ತರಾಗಿ, ನಿರಾತಂಕವಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದಿದ್ದಾರೆ.
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ನಮ್ಮ ಹೆಮ್ಮೆಯ ಎಲ್ಲಾ ಮಕ್ಕಳಿಗೆ ಶುಭ ಹಾರೈಕೆಗಳು.
ಮಕ್ಕಳೆಲ್ಲರೂ ಶಾಂತಚಿತ್ತರಾಗಿ, ನಿರಾತಂಕವಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ.
— S.Suresh Kumar (Modi ka Parivar) (@nimmasuresh) July 18, 2021
ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಏಕ ತಂಡವಾಗಿ ಉತ್ತಮ ವ್ಯವಸ್ಥೆಗಳನ್ನು ಮಾಡಿವೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ. ನಿಮ್ಮ ಮಕ್ಕಳು ನಮ್ಮೆಲ್ಲರ ಮಕ್ಕಳು. ನಮ್ಮ ಎಲ್ಲಾ ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರಗಳು.
https://twitter.com/nimmasuresh?lang=en