ಬೆಂಗಳೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು, ಕಗ್ಗಲಿಪುರದಲ್ಲಿ ನ್ಯಾಯಬೆಲೆ ಅಂಗಡಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಿದರು.
ಕಗ್ಗಲಿಪುರ 5ನೇ ಬ್ಲಾಕ್ ನಲ್ಲಿ ನೂತನವಾಗಿ ಆರಂಭವಾದ ಸರ್ಕಾರಿ ನ್ಯಾಯಬೆಲೆ ಅಂಗಡಿಯನ್ನು ಪಡಿತರ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಸಚಿವರು, ಪಡಿತರಕ್ಕೆ ಅಲೆದಾಡುವುದನ್ನು ತಪ್ಪಿಸುವ ದೃಷ್ಟಿಯಿಂದ ನ್ಯಾಯಬೆಲೆ ಅಂಗಡಿ ಆರಂಭಿಸಲಾಗಿದೆ ಎಂದರು.
ಪ್ರತಿಯೊಬ್ಬ ಕಾರ್ಡ್ ದಾರರಿಗೂ ಪಡಿತರ ಸಿಗಬೇಕು. ಪಡಿತರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಬಡ ಕುಟುಂಬಗಳ ಹಸಿವು ನೀಗಿಸಲು ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ಉತ್ತರಿ, ದಿಣ್ಣೇಪಾಳ್ಯದಲ್ಲಿ ಗ್ರಾಮಸ್ಥರ ಸಭೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು.