ಲಖ್ನೋ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಮುಘಲ್ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಸುಮಾರು 120 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅನೇಕರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.