ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿಂದು ಬಜೆಟ್ ಮಂಡಿಸಿದ್ದಾರೆ. ಈ ವಿಧಾನಸಭಾ ಅವಧಿಯ ಅಂತಿಮ ಬಜೆಟ್ ಇದಾಗಿದ್ದು, ಚುನಾವಣೆಗೆ ತಯಾರಿ ನಡೆದಿರುವಾಗಲೇ ಮಂಡನೆಯಾಗಿರುವ ಈ ಬಜೆಟ್‌ನಲ್ಲಿ ಭರವಸೆಯ ಮಹಾಮಳೆಯನ್ನೇ ಸರ್ಕಾರ ಹರಿಸಿದೆ.
ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಬಗ್ಗೆಯೂ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಚಿತ್ತಹರಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆಯನ್ನು ನೀಡಿದ್ದಾರೆ.
ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡೋದಾಗಿ ಘೋಷಣೆ ಮಾಡಿದರು. ಆಶಾ ಕಾರ್ಯಕರ್ತೆಯರ ಸೇವೆಯನ್ನ ಗುರುತಿಸಿ ಅವರಿಗೆ ನೀಡುವ ಮಾಸಿಕ ಗೌರವಧನ 1000 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು.
ಸಮಾಜದ ಏಳಿಗೆಗಾಗಿ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಕಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನ ಗುರುತಿಸಿ ಅವರಿಗೆ ನೀಡುವ ಮಾಸಿಕ ಗೌರವಧನ 1000 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದರು.
ಇದನ್ನೂ ಓದಿ.. KSRTC ವಿಶಿಷ್ಠ ಪ್ರಯೋಗ.. ಪ್ರಯಾಣಿಕರಿಗಾಗಿ ‘ಅಂಬಾರಿ ಉತ್ಸವ’
https://twitter.com/unsocial2023/status/1627329368975609861?t=LEj13rfU18F7hBqsUnJLGA&s=19