ಕರಾವಳಿ ಮಲೆನಾಡಲ್ಲಿ ಗುಡುಗು ಸಹಿತ ವರ್ಷಧಾರೆ.. ಬಿರುಗಾಳಿ ಮಳೆ.. ಭೂ-ಕುಸಿತದಂತಹಾ ದುರ್ಘಟನೆಗಳ ಆತಂಕ.. ಎಲ್ಲೆಡೆ ಹೈ ಅಲರ್ಟ್..
ಬೆಂಗಳೂರು: ರಾಜ್ಯ ಮುಂಗಾರು ಮಳೆಯ ಅಬ್ಬರಕ್ಕೆ ಸಾಕ್ಷಿಯಾಗಲಿದೆ. ನಾಳೆಯಿಂದ ಕರಾವಳಿ ಮಳೆನಾಡಿನಲ್ಲಿ ಮಳೆ ಭೋರ್ಗರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರದಿಮದ 3 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಈ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಈ ಹಿಂದಿನ ವರ್ಷಗಳಲ್ಲಿ ಸಂಭವಿಸಿದ್ದ ಭೂ ಕುಸಿತದಂತಹಾ ಘಟನೆಗಳು ಮರುಕಳಿಸುವ ರೀತಿಯಲ್ಲಿ ಮಳೆಯಾಗಬಹುದೆಂಬ ಎಚ್ಚರಿಕೆಯನ್ನೂ ಹವಾಮಾನತಜ್ಞರು ನೀಡಿದ್ದು ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. .
ಮಲೆನಾಡು ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬೆಳಗಾವಿ, ಗದಗ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.