ನವದೆಹಲಿ: ರಾಜ್ಯದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಬೋರ್ಡ್ ಪರೀಕ್ಷಾ ವಿವಾದಕ್ಕೆ ಇದೀಗ ಹಠಾತ್ ತಿರುವು ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸೂಚನೆ ನೀಡಿದೆ.
ರಾಜ್ಯದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಈ ಮೇಲ್ಮನವಿ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠವು, ಈ ತರಗತಿಗಳ ಪರೀಕ್ಷೆಗಳ ಫಲಿತಾಂಶ ಘೋಷಣೆಗೆ ತಡೆ ನೀಡಿದೆ. ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ, ಯಾವುದೇ ಶಾಲೆಯು ಘೋಷಿಸಿದ ಫಲಿತಾಂಶಗಳನ್ನು ಯಾವುದೇ ಉದ್ದೇಶಕ್ಕಾಗಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.