ನವದೆಹಲಿ: ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಪಕ್ಷದ ಕಚೇರಿಯೊಂದರ ಉದ್ಘಾಟನೆ ವೇಳೆ ರಾಹುಲ್ ಗಾಂಧಿ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ನಾವು ಈಗ ಅವುಗಳ ವಿರುದ್ಧ ಹೋರಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕರೂ ಆದ ರಾಹುಲ್ ಗಾಂಧಿ ವಿರುದ್ದ ವಕೀಲ ಮೊಂಜಿತ್ ಚೇಟಿಯಾ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕೃತ್ಯಗಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.