ತುಮಕೂರು: ವಿಧಾನಸಭಾ ಚುನಾವಣಾ ಪ್ರಚಾರ ವೇಳೆ ತುಮಕೂರು ಸಮೀಪ ಬೈರೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ನಾಯಕ ಮಾಜಿ ಸಚಿವ ಜಿ.ಪರಮೇಶ್ವರ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಕೃತ್ಯ ಇಂದು ನಡೆದಿದೆ.
ಮನೆ ಮನೆ ಪ್ರಚಾರ ನಡೆಸುತ್ತಿದ್ದ ವೇಳೆ ಪರಮೇಶ್ವರ್ ಅವರಿಗೆ ಬೆಂಬಲಿಗರು ಹೂವಿನ ಸುರಿಮಳೆಗೈದಿದ್ದಾರೆ. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು ಪರಮೇಶ್ವರ್ ಅವರ ತಲೆಗೆ ಗಾಯವಾಗಿದೆ.
ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು ಕೂಡಲೇ ಅವರನ್ನು ಅಕ್ಕಿರಾಂಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ಕಾಂಗ್ರೆಸ್ ನಾಯಕರು, ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಅವರು ತಮ್ಮದೇ ಒಡೆತನದ ಸಿದ್ದಾರ್ಥ ಆಸ್ಪತ್ರೆಗೆ ತೆರಳಿದ್ದಾರೆ.