ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರಮೋದಿಯವರ ‘ರೋಡ್ ಶೋ’ ಅತ್ಯಂತ ಯಶಸ್ವಿಯಾಗಿದೆ ಎಂದು ಕೇಂದ್ರ ಸಚಿವರು ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಾಸಿಗಳನ್ನು ನೋಡಬೇಂಬ ಪ್ರಧಾನಿಯವರ ಆಶಯದಿಂದ ಮೂರು ದಿನ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ರೋಡ್ ಶೋ ಆಯೋಜಿಸಿತ್ತು. ನಗರದ ಜನರು ಪ್ರಧಾನಿಯವರನ್ನು ಹತ್ತಿರದಿಂದ ನೋಡಬೇಕೆನ್ನುವ ಕೋರಿಕೆ ಇಟ್ಟಿದ್ದರು. ಕಾರ್ಯಕ್ರಮ ಯಶಸ್ವಿಯಾಗಿ ಜನರು ಖುಷಿ ಪಟ್ಟಿದ್ದಾರೆ ಎಂದು ವಿಶ್ಲೇಷಿಸಿದರು.
Today once again, I’ve been humbled by the affection across Bengaluru. pic.twitter.com/kuZmqLAhK3
— Narendra Modi (@narendramodi) May 7, 2023
ಜನರು ಮೋದಿಯವರನ್ನು ಎಷ್ಟು ಪ್ರೀತಿಸುತ್ತಾರೆ, ಮೋದಿಯವರು ಜನರು ಎಷ್ಟು ಇಷ್ಟ ಪಡುತ್ತಾರೆ ಎಂಬುದಕ್ಕೆ ಈ ಕಾರ್ಯಕ್ರಮ ನಿದರ್ಶನವಾಗಿದೆ. ಕಾರ್ಯಕ್ರಮ ಯಶಸ್ವಿ ಮಾಡಿದ್ದಕ್ಕೆ ಬೆಂಗಳೂರು ಜನತೆ ಪ್ರಧಾನಿಯವರು ಮತ್ತು ಬಿಜೆಪಿ ಪರವಾಗಿ ಧನ್ಯವಾದಗಳು. ಪೊಲೀಸ್ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೂ ಧನ್ಯವಾದಗಳು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್ ಉಪಸ್ಥಿತರಿದ್ದರು.