ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೋನಾ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್’ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಸಲಹೆ ಮಾಡಿದ್ದರು.
ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ
— B.S.Yediyurappa (Modi Ka Parivar) (@BSYBJP) April 16, 2021
ಆದರೂ ಕೂಡ, ಸಿಎಂ ಜೊತೆ ಸಂಪರ್ಕ ಹೊಂದಿದ್ದಾರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ತಾವು ಕ್ವಾರಂಟೈನ್ ಆಗಬೇಕೇ ಎಂಬ ಪ್ರಶ್ನೆ ಕಾಡಿದೆಯಂತೆ. ಈ ಕುರಿತಂತೆ ಸುಧಾಕರ್ ಮಾಡಿರುವ ಟ್ವೀಟ್ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ನಾನು ಕ್ವಾರಂಟೈನ್ ಆಗಬೇಕೇ ಎಂಬ ಪ್ರಶ್ನೆ ವ್ಯಕ್ತವಾಗಿದೆ. ಸಭೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಹೊರಾಂಗಣದಲ್ಲಿ ನಡೆದಿದ್ದು, ಭೌತಿಕ ಅಂತರ, ಮಾಸ್ಕ್ ಧರಿಸುವ ಮುನ್ನೆಚ್ಚರಿಕೆಗಳನ್ನು ಪಾಲಿಸಲಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.
ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ನಾನು ಕ್ವಾರಂಟೈನ್ ಆಗಬೇಕೇ ಎಂಬ ಪ್ರಶ್ನೆ ವ್ಯಕ್ತವಾಗಿದೆ.
ಇಂದು ನಡೆದ ಸಭೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಹೊರಾಂಗಣದಲ್ಲಿ ನಡೆದಿದ್ದು, ಭೌತಿಕ ಅಂತರ, ಮಾಸ್ಕ್ ಧರಿಸುವ ಮುನ್ನೆಚ್ಚರಿಕೆಗಳನ್ನು ಪಾಲಿಸಲಾಗಿತ್ತು.
1/3
— Dr Sudhakar K (Modi ka Parivar) (@DrSudhakar_) April 16, 2021
ಕೋವಿಡ್ ಎರಡನೇ ಅಲೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವನ ಸ್ಥಾನದಲ್ಲಿ ಸ್ವತಃ ಮುಂಚೂಣಿ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿರುವ ನಾನು ನನ್ನ ಕರ್ತವ್ಯವನ್ನು ಎಂದಿನಂತೆ ಮುಂದುವರಿಸುವುದು ಅತ್ಯಂತ ಅನಿವಾರ್ಯವಾಗಿದೆ ಎಂದೂ ಅವರು ಹೇಳಿಕೊಂಡಿದ್ದಾರೆ.
ಕೋವಿಡ್ ಎರಡನೇ ಅಲೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವನ ಸ್ಥಾನದಲ್ಲಿ ಸ್ವತಃ ಮುಂಚೂಣಿ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿರುವ ನಾನು ನನ್ನ ಕರ್ತವ್ಯವನ್ನು ಎಂದಿನಂತೆ ಮುಂದುವರಿಸುವುದು ಅತ್ಯಂತ ಅನಿವಾರ್ಯವಾಗಿದೆ.
2/3
— Dr Sudhakar K (Modi ka Parivar) (@DrSudhakar_) April 16, 2021
ಇದೇ ವೇಳೆ, ಸಾಮಾಜಿಕ ಅಂತರ, ಮಾಸ್ಕ್ ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತ ಕನಿಷ್ಠ ಜನಸಂಪರ್ಕದೊಂದಿಗೆ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ನಾಲ್ಕು ದಿನಗಳ ನಂತರ ಕೊರೊನಾ ಪರೀಕ್ಷೆಗೆ ಒಳಪಡುತ್ತೇನೆ ಎಂದಿದ್ದಾರೆ.
ಆದ್ದರಿಂದ ಸಾಮಾಜಿಕ ಅಂತರ, ಮಾಸ್ಕ್ ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತ ಕನಿಷ್ಠ ಜನಸಂಪರ್ಕದೊಂದಿಗೆ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ನಾಲ್ಕು ದಿನಗಳ ನಂತರ ಕೊರೊನಾ ಪರೀಕ್ಷೆಗೆ ಒಳಪಡುತ್ತೇನೆ.
3/3
— Dr Sudhakar K (Modi ka Parivar) (@DrSudhakar_) April 16, 2021